top of page

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!

  • Writer: sumanth newwaves
    sumanth newwaves
  • Sep 19
  • 1 min read

ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ree

ನವದೆಹಲಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇತಿಹಾಸ ಬರೆದಿದ್ದು ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ.

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ (Harmanpreet Singh) ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.


ಸಂಪೂರ್ಣ ಪ್ರಾಬಲ್ಯ ಮೆರೆದ ಭಾರತ

ಟೂರ್ನಿಯ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾ ಮೇಲೆ ಅಕ್ಷರಶಃ ಸವಾರಿ ಮಾಡಿತು. ಕೊರಿಯಾ ತಂಡಕ್ಕೆ ಯಾವುದೇ ಅವಕಾಶ ನೀಡದ ಭಾರತ ತಂಡ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು


ನಾಲ್ಕನೇ ಬಾರಿಗೆ ಚಾಂಪಿಯನ್

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ.

Comments


ಹೆಚ್ಚು ಓದಿದ ಸುದ್ದಿ

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ಚುರುಮುರಿ: ಸಂಬಳದ ಜೋಕು!

ಕ್ರೀಡೆ

IPL 2025 ಕಳಪೆ ಸಾಧನೆ: ತವರಿನ ಅಂಗಳ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ 45ನೇ ಸೋಲು!

 

ಸಿನಿಮಾ ರಂಗಕ್ಕೆ ಕಾಲಿಟ್ಟ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ!

 

IPL 2025:ಪಾಟೀದಾರ್ ನಾಯಕತ್ವದ ಬಗ್ಗೆ ಮೈದಾನದಲ್ಲೇ ಅಸಮಾಧಾನ ತೋಡಿಕೊಂಡ ಕೊಹ್ಲಿ?

 

IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್‌

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

 

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

 

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

 

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ

  • White Facebook Icon
bottom of page